ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಿಜಾಬ್ ನಿಷೇಧದ ಆದೇಶವನ್ನು ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಒಂದು ರಾಜ್ಯದ ಮುಖ್ಯಮಂತ್ರಿ, ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಅವರು ಸ್ವತಂತ್ರರು. ಆದರೆ ಈ ನಿರ್ಧಾರ ಜನ ಒಪ್ಪುವಂಥದ್ದಲ್ಲ. ನಾನು ಇದನ್ನು ಖಂಡಿಸುತ್ತೇನೆ. ಅಲ್ಪಸಂಖ್ಯಾತರ ಮತ ಓಲೈಕೆಗಾಗಿ ಸಿಎಂ ಮಾಡಿದ ಕೆಲಸ ಇದು ಎಂದು ಹೇಳಿದ್ದಾರೆ.
ಬಟ್ಟೆ, ಊಟ ಅವರವರ ಇಷ್ಟ ಅದರ ಮೇಲೆ ನಿರ್ಬಂಧ ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.