ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಪವರ್ ತೋರಿಸಲು ಡಿ.ಕೆ.ಶಿವಕುಮಾರ್ ಅವರನ್ನು ಸಭೆಗೆ ಆಹ್ವಾನಿಸಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅಶೋಕ್, ಕಾಂಗ್ರೆಸ್ ಶಾಸಕರ ಬೆಂಬಲ ಡಿಕೆಶಿಗೆ ಇಲ್ಲವೆಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದ್ದರಿಂದಲೇ ಆ ಸಭೆಗೆ ಅವರನ್ನು ಕರೆದಿಲ್ಲ. ಎರಡು ವರ್ಷದಿಂದ ಏನೂ ಕೊಡದೆ ಈಗ 50 ಕೋಟಿ ನೀಡಿದರೆ ಪ್ರಯೋಜನವಿಲ್ಲ. ಅದರಲ್ಲೂ ಸಿದ್ದರಾಮಯ್ಯನವರ ಬೆಂಬಲಿಗ ಶಾಸಕರಿಗೆ ಮಾತ್ರ 50 ಕೋಟಿ ರೂ. ನೀಡಲಾಗುತ್ತಿದೆ. ಬಿಜೆಪಿ ಶಾಸಕರಿಗೂ 50 ಕೋಟಿ ರೂ. ನೀಡಬೇಕೆಂದು ಆಗ್ರಹಿಸಲಾಗುವುದು ಎಂದು ಅಶೋಕ್ ಕಿಡಿಕಾರಿದರು.