ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ನೀಡಿದೆ.
ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು.
ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು 2022ರಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು. 2022ರಲ್ಲಿ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ಪ್ರತಿಭಟನೆ ಮಾಡಿದ್ದಕ್ಕೆ ಶಿವಾಜಿನಗರ ಹಾಗೂ ವಿಲ್ಸನ್ ಗಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದವು. ಆದ್ರೆ, ಡಿಕೆ ಶಿವಕುಮಾರ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಕಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆದ್ರೆ, ಇದೀಗ ವಿಲ್ಸನ್ ಗಾರ್ಡನ್ ಕೇಸ್ನಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.