Sunday, June 4, 2023

Latest Posts

ತೀವ್ರ ಕುತೂಹಲ ಮೂಡಿಸಿದೆ ಸಿದ್ದರಾಮಯ್ಯ, ಡಿಕೆಶಿ- ಲಕ್ಷ್ಮಣ ಸವದಿ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ ಘೋಷಿಸಿದ ನಂತರ ಸಾಕಷ್ಟು ಮಹತ್ತರ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದಾರೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ನಂತರ ಇದೀಗ ಸಿದ್ದು ನಿವಾಸದಲ್ಲಿ ಲಕ್ಷ್ಮಣ ಸವದಿ ಕಾಣಿಸಿಕೊಂಡಿದ್ದಾರೆ. ಬಿಜೆಪಿ ಅಥಣಿಯಿಂದ ಮಹೇಶ ಕುಮಠಳ್ಳಿಗೆ ಟಿಕೆಟ್ ನೀಡಿದೆ, ಆದರೆ ಈ ಕ್ಷೇತ್ರದಿಂದ ಕಾಂಗ್ರೆಸ್ ಇನ್ನೂ ಯಾರಿಗೂ ಟಿಕೆಟ್ ನೀಡಿಲ್ಲ.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದರೂ, ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ನಡೆಸಿದ್ದ ಷಡ್ಯಂತ್ರಗಳ ಬಗ್ಗೆ ಮುಂಚೆಯೇ ನನಗೆ ಎಚ್ಚರಿಕೆ ನೀಡಿದ್ದರು. ನನ್ನ ಗೆಲುವಿಗೆ ಯಾವ ತಡೆಯಾಗದಂತೆ ಸಿದ್ದರಾಮಯ್ಯ ಸಹಾಯ ಮಾಡಿದ್ದನ್ನು ದಿಢೀರ್ ನೆನೆದಿದ್ದಾರೆ.

 

ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾಗಿದ್ದು, ರಾಜಕೀಯದಲ್ಲಿ ಸವದಿ ನಡೆ ಬಗ್ಗೆ ತೀವ್ರ ಕುತೂಹಲ ಎದುರಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!