ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ಚುನಾವಣಾ ಅಖಾಡಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಶುಕ್ರವಾರ(ನಾಳೆ) ಪ್ರಚಾರ ನಡೆಸಲಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್ ರೆಡ್ಡಿ ಸ್ಪರ್ಧಿಸಿರುವ ಕಾಮರೆಡ್ಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡು, ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ವಿರುದ್ಧ ಎ. ರೇವಂತ್ ರೆಡ್ಡಿ ಕಣಕ್ಕಿಳಿದಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಶಿವಕುಮಾರ್, ಕೋದಾಡು ಮತ್ತು ಹುಜೂರ್ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಕಚೇರಿ ಮಾಹಿತಿ ಹಂಚಿಕೊಂಡಿದೆ.