ಸಿದ್ದರಾಮಯ್ಯ, ಡಿಕೆಶಿ ಚುನಾವಣೆಗೆ ಸ್ಪರ್ಧಿಸದಿದ್ದರೇ ಲೇಸು: ಸಂತೋಷ್‌ ಲಾಡ್‌ ಬಾಂಬ್

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಜ್ಯದ ಯಾವುದೇ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಡಿ.ಕೆ. ಶಿವಕುಮಾರ ಸ್ಪರ್ಧಿಸಬಾರದು. ಅವರಿಬ್ಬರು ರಾಜ್ಯಾದ್ಯಂತ ಪಕ್ಷ ಬಲಪಡಿಸುವ ಕಾರ್ಯಮಾಡಲಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೊಸ ಬಾಂಬ್‌ ಸಿಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪಕ್ಷ ಬಲಪಡಿಸುವ ಕೆಲಸ ಮಾಡಲಿ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಅಲ್ಲಿಗೆ ಸೀಮಿತವಾಗುವುದು ಬೇಡ. ಇಡೀ ರಾಜ್ಯ ಸುತ್ತಬೇಕಾಗಿರುವುದರಿಂದ ಅವರು ಸ್ಪರ್ಧಿಸದಿರುವುದು ಒಳ್ಳೆಯದು ಎಂದರು.

ಇದು ನನ್ನ ವೈಯಕ್ತಿಕ ಅಭಿಪ್ರಾಯ, ಡಿ.ಕೆ. ಶಿವಕುಮಾರ್ ಸಹ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ. ರಾಜ್ಯ ಸುತ್ತಾಟ ಮಾಡಿ ಪ್ರಚಾರದಲ್ಲಿ ಇಬ್ಬರು ನಾಯಕರು ತೊಡಗಿ, ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಸ್ಪರ್ಧಿಸದೆಯೂ ಅಧಿಕಾರ ನಡೆಸಬಹುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!