ಹೊಸದಿಗಂತ ವರದಿ ಹುಬ್ಬಳ್ಳಿ:
ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಹಾಗೂ ಇತಿಹಾಸ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಅವರಿಗೆ ಗೊತ್ತಿಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಸಾವರ್ಕರ್ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಸಿದ್ದರಾಮಯ್ಯನವರ ಅಜ್ಞಾನವನ್ನು ಪದರ್ಶಿಸುತ್ತಿದ್ದಾರೆ. ಎಲ್ಲದಕ್ಕೂ ಮಿತಿ ಇರಬೇಕು ಅದನ್ನು ಮೀರಿ ನಡೆದುಕೊಳ್ಳತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಟೀಕೆ ಮಾಡುತ್ತಿರುವುದು ಅವರ ಅಂತ್ಯಕ್ಕೆ ಕಾರಣವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿಯವರು ಆಡಳಿತದಲ್ಲಿ ಖಾದಿಗೆ ಮಹತ್ವ ದೊರೆತಿದೆ. ಖಾದಿ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ಅವರಿಂದ ಸಿಕ್ಕಿದೆ. ದೇಶ ಭಕ್ತಿ ಹೆಚ್ಚಿಸುವ ಉದ್ದೇಶದಿಂದ ಪಾಲಿಸ್ಟರ್ ಧ್ವಜಕ್ಕೆ ಅವಕಾಶ ನೀಡಿದ್ದಾರೆ. ಆದರೆ ಪ್ರತಿಪಕ್ಷದವರು ಟೀಕೆ ಮಾಡುತ್ತಿರುವುದು ಸರಿಯಲ್ಲ. ಖಾದಿ ಉತ್ಪಾದನೆಗೆ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದರು.
ಸರ್ಕಾರದ ಯಾವುದೇ ಕಾರ್ಯಕ್ರಮಕ್ಕೆ ವಿವಾದ ಸೃಷ್ಟಿಯಾಗುತ್ತಿವೆ. ಕಾನೂನಿ ಗಿಂತ ಯಾರು ದೊಡ್ಡವರಲ್ಲ. ಯಾವುದೇ ಸಮಸ್ಯೆಯಾದರೂ ಸಹ ಚರ್ಚೆ ಮಾಡುವ ಮೂಲಕ ಹಾಗೂ ಶಾಂತಿಯುತವಾಗಿ ಪ್ರತಿಭಟನೆ ನಡಸಬೇಕು ಎಂದು ಶಿವಮೊಗ್ಗಾದಲ್ಲಿ ಸಾವರ್ಕರ್ ಪೋಸ್ಟರ್ ಕಿತ್ತಿರುವ ಬಗ್ಗೆ ಪ್ರತಿಕ್ರಿಸಿದರು.