ಮೋದಿ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ: ಸಿಎಂ ವಿರುದ್ಧ ಆರ್ ಆಶೋಕ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡುವ ನೈತಿಕತೆ ಸಿಎಂ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕಕ್ಕೆ ಬರ ಪರಿಹಾರ ನೀಡಿರುವ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆಯಿಂದಾಗಿ ಬರ ಪರಿಹಾರ ವಿಳಂಬವಾಗಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಎಲ್ಲ ಹಣ ಬಿಡುಗಡೆಯಾಗಿದೆ ಎಂದರು.

ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕಿಂತ ಹೆಚ್ಚಿನ ಹಣವನ್ನು ಮೋದಿ ಸರಕಾರ ನೀಡಿದೆ. ಆದರೆ, ಸಿಎಂ ಸಿದ್ದರಾಮಯ್ಯ ಪರಿಹಾರ ವಿಚಾರದಲ್ಲಿ ಸುಳ್ಳು ಹೇಳುತ್ತಲೇ ಇದ್ದಾರೆ. ಈ ಆಲೋಚನೆಯಿಂದ ಅವರು ಅಪಪ್ರಚಾರ ಮಾಡುತ್ತಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ತಪ್ಪು ಎಂದು ಅಶೋಕ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!