ಚುನಾವಣಾ ಪ್ರಚಾರದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಸಿದ್ದರಾಮಯ್ಯ, ಏನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಲು ಬಳ್ಳಾರಿಯ ಕೂಡ್ಲಿಗಿಗೆ ಆಗಮಿಸಿದ್ದ ವೇಳೆ ಕಾರಿನ ಬಾಗಿಲ ಬಳಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಶನಿವಾರ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಪರವಾಗಿ ಸಿದ್ದರಾಮಯ್ಯ ಪ್ರಚಾರಕ್ಕೆ ಆಗಮಿಸಿದ್ದರು ಈ ವೇಳೆ ಕಾರು ಹತ್ತುವಾಗ ಕುಸಿದು ಬಿದ್ದದ್ದಕ್ಕೆ ಬಿಸಿಲಿನ ಝಳಕ್ಕೆ ಬಿದ್ದಿದ್ದಾಗಿ ವರದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ವದಂತಿ ಹರಡದಂತೆ ಮನವಿ ಮಾಡಿದ್ರು.

ಈ ಕುರಿತು ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ʻಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿ‌ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!