ಹೊಸದಿಗಂತ ವರದಿ,ಬಾಗಲಕೋಟೆ:
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಇಂದು ಬಾದಾಮಿಗೆ ಆಗಮಿಸಿದ ಸಿದ್ದರಾಮಯ್ಯ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು ಭರ್ಜರಿ ಸ್ವಾಗತ ಕೋರಿದರು.
ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಕಾರ್ಯಕ್ರಮದ ವೇದಿಕೆಗೆ ಕರೆದೊಯ್ದು ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೂ ಮಳೆ ಸುರಿಸುವ ಮೂಲಕ ಆಭಿಮಾನ ಮೆರೆದರು. ಕಬ್ಬಿನ ಹಾರ ಸಲ್ಲಿಸಿ ಸಂಭ್ರಮಿಸಿದರು.
ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಸೇರಿದ್ದರು.