ಹೊಸದಿಗಂತ ವರದಿ,ತುಮಕೂರು
ರಾಜ್ಯದಲ್ಲಿ ಭೀಕರ ಬರವಿದ್ದು, ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಜಿಲ್ಲೆಯ ಕೊರಟಗೆರೆ ಮತ್ತು ಮಧುಗಿರಿ ತಾಲೂಕುಗಳಲ್ಲಿ ಇಂದು ಬರವೀಕ್ಷಣೆ ಮಾಡಿದ ಅವರು ಮಧುಗಿರಿ ತಾಲ್ಲೂಕಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಗಿರಿ ತಾಲ್ಲೂಕಿನ ಕೋಡ್ಲಾಪುರ ಗ್ರಾಮದಲ್ಲಿನ ಜಮೀನುಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಿಸಿದರು. ಬಿತ್ತಿದ ಬೀಜವೇ ಸಿಗುತ್ತಿಲ್ಲ, ರೈತರ ಸಂಕಷ್ಟಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವುದಾಗಿ ರೈತರಿಗೆ ಭರವಸೆ ನೀಡಿದರು.
ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಬಗ್ಗೆ ತಮಗೆ ಗೌರವವಿದೆ, ಆದರೆ,ಅವರ ಕ್ಷೇತ್ರದಲ್ಲಿ ಪರಿಶಿಷ್ಟ ರಿಗೆ ಅಂತ್ಯಕ್ಕಾಗಿ ಪರಿಹಾರ ದ ಚೆಕ್ ಬೌನ್ಸ್ ಆಗಿದೆ ಅಂದರೆ ಖಜಾನೆಯಲ್ಲೀ ಹಣ ಇಲ್ಲ ಎಂದು ಅರ್ಥ. ಶೇಂಗಾ ಬೆಳೆ ಸಂಪೂರ್ಣ ಹಾಳಾಗಿದೆ,ಪಡಿತರ ವ್ಯವಸ್ಥೆಯಲ್ಲಿ ಕಳಪೆ ರಾಗಿ,ಅಕ್ಕಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ. ಅಕ್ಕಿ ಕೊಡುತ್ತಿದ್ದರು ಕೊರಟಗೆರೆಯಲ್ಲಿ 3ಕೆಜಿ ಅಕ್ಕಿ 2 ಕೆಜಿ ರಾಗಿ ಕೊಡಲಾಗುತ್ತದೆ ಎಂದು ಆರೋಪಿಸಿದರು.
ರಾಜ್ಯವನ್ನು ಬರಪೀಡಿತ ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರ ವನ್ನು ಒತ್ತಾಯ ಮಾಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ದುರಸ್ತಿಗೆ,ಅಭಿವೃದ್ಧಿ ಸ್ಥಗಿತವಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಅಧಿಕಾರಿಗಳ ಬರ ಅಧ್ಯಯನ ತಂಡ ಬಂದು ಹೋದರೂ ಸಹ ಪರಿಹಾರನೀಡಿಲ್ಲ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ತನ್ನಲ್ಲಿರುವ ಹಣದಲ್ಲಿ ಬ್ರಿಟಿಷರ ಕಾಮಗಾರಿಗಳನ್ನು ಆರಂಭಿಸಬೇಕು ಹಣ ಬಂದಾಗ ಆ ಹಣದ ಹೊಂದಾಣಿಕೆ ಮಾಡಿಕೊಳ್ಳಬೇಕು.ಅದು ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸಿ ಎಂದರು.ಕಿಸಾನ್ ಸಮ್ಮಾನ್ ಯೋಜನೆ ಅಡಿ ಕೇಂದ್ರ ದ 6ಸಾವಿರ ರೂಗಳ ಜೊತೆ ನಮ್ಮ ಸರ್ಕಾರ 4ಸಾವಿರರೂಗಳನ್ನು ರೈತರಿಗೆ ನೀಡುತ್ತಿದ್ದವು,ಆದರೆ ಸಿದ್ದರಾಮಯ್ಯ ಸರ್ಕಾರ 4 ಸಾವಿರ ರೂಗಳನ್ನು ನೀಡುವುದನ್ನು ನಿಲ್ಲಿಸಿದೆ ಎಂದು ಆರೋಪಿಸಿದರು.