ಭ್ರಷ್ಟಾಚಾರದ ಸುಳಿಯಲ್ಲಿ ಸಿದ್ದರಾಮಯ್ಯ ಸರ್ಕಾರ? ಕೃಷಿಮಂತ್ರಿ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ಕೃಷಿ ಅಧಿಕಾರಿಗಳು ಬರೆದಿದ್ದಾರೆನ್ನಲಾಗುತ್ತಿರುವ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಟೈಮ್ಸ್ ನೌ ಸುದ್ದಿವಾಹಿನಿ ವರದಿ ಪ್ರಕಾರ ರಾಜ್ಯಪಾಲರು ಈ ಆರೋಪವನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನೂ ಕಳಿಸಿದ್ದಾರೆ.

ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಡಲ, ಶ್ರೀರಂಗಪಟ್ಟಣ ಹಾಗೂ ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ಲಂಚ ಆರೋಪ ಸಂಬಂಧ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿ ಸಂಗ್ರಹಿಸಿ ಕೊಡುವಂತೆ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತರಾಗಿ ವಿಷ ಕುಡಿದು ಸಾಯುತ್ತೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಈ ಬಗ್ಗೆ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಇದೊಂದು ಫೇಕ್ ಲೆಟರ್, ನನ್ನನ್ನು ಸಿಕ್ಕಿಸಲು ಮಾಡಿರುವ ಷಡ್ಯಂತ್ರ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ನಂತರ ಮಾತನಾಡುತ್ತೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!