ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಸಿಬಿಐ ಎಂಟ್ರಿಯಾದರೆ ಸರ್ಕಾರಕ್ಕೂ ಸಂಕಷ್ಟ ಎದುರಾಗಲಿದೆ. ಹೀಗಾಗಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಸಚಿವ ಬಿ.ನಾಗೇಂದ್ರಗೆ (B Nagendra) ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು.