ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪಿಪಿಇ ಕಿಟ್ ಖರೀದಿಗೆ ಸಂಬಂಧಿಸಿದಂತೆ ಶ್ರೀರಾಮುಲು ಮತ್ತು ಯಡಿಯೂರಪ್ಪ ತಪ್ಪಿತಸ್ಥರು ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಸಮಿತಿಯು ತನ್ನ ವರದಿಯಲ್ಲಿ ಹೇಳಿದ್ದರೆ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಪಡೆಯಲು ಸಿದ್ದರಾಮಯ್ಯ ಏಕೆ ಇಷ್ಟು ದಿನ ಮೌನವಾಗಿದ್ದರು? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಟೀಕೆ ಮಾಡಿದವರ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸುತ್ತಾರೆ. ಇದೇ ಕಾರಣಕ್ಕೆ ಸಿ.ಟಿ.ರವಿ, ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮತ್ತು ನನ್ನ ವಿರುದ್ಧ ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಟೀಕಿಸಿದ್ದಾರೆ.