Saturday, April 1, 2023

Latest Posts

ಬಿಜೆಪಿ ವಿಶೇಷ ಕಾರ್ಯಕಾರಿಣಿ: ಕೈ ನಾಯಕರನ್ನು ಮುಳುಗಿಸಿದ ಕೀರ್ತಿ ಸಿದ್ದರಾಮಯ್ಯರದ್ದು-ಪ್ರಲ್ಹಾದ್‌ ಜೋಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿದ್ದರಾಮಯ್ಯವರು ಕಾಂಗ್ರೆಸ್‌ ನಾಯಕರನ್ನು ಒಬ್ಬೊಬ್ಬರನ್ನೇ ಮುಳುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಖರ್ಗೆಯನ್ನು ಸೋಲಿಸಿದರು, ಪರಮೇಶ್ವರರನ್ನು ಮುಗಿಸಿದರು. ಇದೀಗ ಮುನಿಯಪ್ಪರನ್ನು ಮುಳುಗಿಸಲು ಹೊರಟಿದ್ದಾರೆ.

ದಲಿತರಿಗೆ ಅನ್ಯಾಯ ಮಾಡಿದ ಪಕ್ಷ ಕಾಂಗ್ರೆಸ್ ಎಂಬುದನ್ನು ಜನರಿಗೆ ತಿಳಿಸಬೇಕಿದೆ. ನಾವು ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯ ಕೊಟ್ಟದ್ದನ್ನು ತಿಳಿಸಬೇಕು ಎಂದು ಮನವಿ ಮಾಡಿದರು.

ಈ ಬಾರಿ ಕೇಂದ್ರ ಸರಕಾರ ಅತ್ಯುತ್ತಮ ಬಜೆಟ್ ಮಂಡಿಸಿದೆ. ಅಮೃತ ಕಾಲದ ಲಕ್ಷಣಗಳು ಕಾಣುತ್ತಿವೆ. ರಾಜ್ಯದ ಚುನಾವಣಾ ಯುದ್ಧದಲ್ಲಿ ನಾವು ಗೆಲ್ಲಲಿದ್ದೇವೆ ಎಂದು ನುಡಿದರು. ಭಾರತವು ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ನಾಯಕನಾಗಿದೆ. ಇನ್ನು ಕೆಲಸವೇ ವರ್ಷಗಳಲ್ಲಿ ಭಾರತ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ. ಅರುಣಾ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಅಪೇಕ್ಷಿತರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!