Thursday, July 7, 2022

Latest Posts

ಸಿದ್ದರಾಮಯ್ಯನವರು ತಮ್ಮ ಘನತೆಗೆ ತಕ್ಕಂತೆ ಮಾತನಾಡೋದು ಒಳಿತು: ಮಾಜಿ ಸಿಎಂ ಬಿಎಸ್ ವೈ

ಹೊಸದಿಗಂತ ವರದಿ, ಶಿವಮೊಗ್ಗ:

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕ್ಷುಲ್ಲಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಘನತೆಗೆ ತಕ್ಕಂತೆ, ನಾಲಿಗೆಯನ್ನು ಹದ್ದುಬಸ್ತಿನಲ್ಲಿಟ್ಟುಕೊಂಡು ಮಾತನಾಡುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅವರ ಸ್ಥಾನಕ್ಕೆ ಇಂತಹ ಹೇಳಿಕೆಗಳು ಶೋಭೆ ತರುವುದಿಲ್ಲ. ನಾಲಿಗೆ ಮೇಲೆ ಹಿಡಿತ ಕಳೆದುಕೊಂಡರೆ ಮುಂದಿನ ದಿನಗಳಲ್ಲಿ ಜನರೇ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪ್ರಚಾರಕ್ಕೆ ಸಿದ್ಧವಾಗಿದ್ದೇನೆ: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಉಪಚುನಾವಣೆ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇನೆ. ಅಕ್ಟೋಬರ್ 20ರಿಂದ ಎರಡು ದಿನ ಸಿಂಧಗಿ ಹಾಗೂ 22ರಿಂದ ಎರಡು ದಿನ ಹಾನಗಲ್ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ನಾನೊಂದು ಕ್ಷೇತ್ರದಲ್ಲಿ, ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದೇವೆ. ಅಗತ್ಯ ಬಿದ್ದರೆ ನಾನು ಎರಡನೇ ಹಂತದಲ್ಲೂ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತೇನೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss