ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪ್ಪು ತಿಂದವರು ನೀರು ಕುಡಿಯಬೇಕು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ದಲಿತರಿಗೆ ದ್ರೋಹ ಬಗೆದಿರುವ ಹಾಗೂ ಮುಡಾ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿದ ಭ್ರಷ್ಟ ಸಿಎಂ ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸ ತಂದಿದೆ. ದಲಿತರ ಜಮೀನು ಕಬಳಿಸಿ, 14 ಅತಿ ಬೆಲೆಬಾಳುವ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿದ ಸಿದ್ದರಾಮಯ್ಯ ಅವರಿಗೆ ಸಿಎಂ ಆಗಿ ಮುಂದುವರಿಯುವ ಅರ್ಹತೆ ಇಲ್ಲ. ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.