ಕ್ಷೇತ್ರ ಹುಡುಕಾಟದಲ್ಲಿ ಸಿದ್ದರಾಮಯ್ಯ: ಸೋಲುವ ಭೀತಿ ಎದುರಾಗಿದೆ ಎಂದ ಯಡಿಯೂರಪ್ಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಬಾದಾಮಿ ಬಿಟ್ಟು ಬೇರೆ ಕ್ಷೇತ್ರಕ್ಕೆ ಯಾಕೆ ಹೋಗ್ತಿದ್ದಾರೆ ಗೊತ್ತಿಲ್ಲ. ಎಲ್ಲೋ ಒಂದುಕಡೆ ಅವರಿಗೆ ಸೋಲುವ ಭೀತಿ ಎದುರಾಗಿದೆ. ಹಾಗಾಗಿ ಕ್ಷೇತ್ರ ಹುಡುಕಾಟ ನಡೆಸಿದ್ದಾರೆ ಎಂದರು.
ಕೋಲಾರದಲ್ಲಿ ಸ್ಪರ್ಧಿಸುತ್ತಾರೋ ಅಥವಾ ಬೇರೆಡೆ ನಿಲ್ಲುತ್ತಾರೋ ಅದು ಅವರಿಗೆ ಬಿಟ್ಟದ್ದು. ಆದರೆ ಕ್ಷೇತ್ರ ಬದಲಾವಣೆ ಮಾಡುತ್ತಿದ್ದಾರೆ, ಬಾದಾಮಿ ಬಿಟ್ಟು ಬೇರೆಡೆ ಸ್ಪರ್ಧಿಸುತ್ತಿದ್ದಾರೆ ಅಂದರೆ ಅವರಿಗೆ ಗೆಲ್ಲುವ ವಿಶ್ವಾಸವಿಲ್ಲ ಎಂದರ್ಥ. ಹಾಗಾಗಿ ಬೇರೆ ಕ್ಷೇತ್ರದತ್ತ ಮುಖಮಾಡಿದ್ದಾರೆ ಎಂದು ಟಾಂಗ್ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!