ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರು ಜನಮನ್ನಣೆ ಪಡೆದ ನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವ ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ದಾಖಲೆ ಸರಿಗಟ್ಟಿದ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದೇವರಾಜ ಅರಸರು ಸಮಾಜಮುಖಿ ಆಡಳಿತದ ಮೂಲಕ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರು ಕೂಡ ಜನಪರ ಆಡಳಿತದಿಂದ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿದ್ದಾರೆ. ಈ ಸಾಧನೆಗೆ ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: Rice series 21 | ಪುಡಿ ಚಿತ್ರಾನ್ನ: ಮನೆಯಲ್ಲೇ ಮಾಡೋ ಹೊಸ ರುಚಿಯ ಸ್ಪೆಷಲ್ ರೈಸ್!
ಜೊತೆಗೆ, ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಇಂತಹ ಅವಕಾಶಗಳು ಸೃಷ್ಟಿಯಾಗುತ್ತವೆ ಎಂದು ತಿಳಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಅವರಂತಹ ವರಿಷ್ಠರ ಬೆಂಬಲದಿಂದಲೇ ಇಂತಹ ದಾಖಲೆ ಸಾಧ್ಯವಾಗಿದೆ ಎಂದು ಹೇಳಿದರು.
ಅಭಿವೃದ್ಧಿ ಹಾಗೂ ಬಡವರ ಪರ ನಿಲುವು ಕಾಂಗ್ರೆಸ್‌ನ ಮೂಲ ತತ್ವ. ದೇವರಾಜ ಅರಸರು ಮತ್ತು ಸಿದ್ದರಾಮಯ್ಯ ಇಬ್ಬರೂ ಇದೇ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅದಕ್ಕಾಗಿಯೇ ಇತಿಹಾಸದಲ್ಲಿ ತಮ್ಮದೇ ಆದ ಸ್ಥಾನ ಪಡೆದಿದ್ದಾರೆ ಎಂದು ಹೇಳಿದರು.

