ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಸಿಎಂ ಆರೋಪ ವಿಚಾರಕ್ಕೆಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಿಎಂ ಆದ್ಮೇಲೆ ದ್ವೇಷದ ರಾಜಕೀಯ ಮಾಡ್ತಿದ್ದಾರೆ. ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ. ತಮ್ಮ ಮೇಲೆ ವಾಲ್ಮೀಕಿ, ಮುಡಾ, ವಕ್ಫ್ ವಿವಾದ ಇದೆ. ಅಲ್ಪಸಂಖ್ಯಾತರ ಗುತ್ತಿಗೆದಾರಿಗೆ ಶೇ.4 ಮೀಸಲಾತಿ ನೀಡುವ ವಿವಾದ ಇದೆ. ಯಾವಾಗ ಮುಡಾ ತನಿಖೆ ಗಂಭೀರವಾಗಲು ಪ್ರಾರಂಭ ಆಯ್ತೋ ಆಗ ಕೋವಿಡ್ ವಿಚಾರದಲ್ಲಿ ಯಡಿಯೂರಪ್ಪ ಮೇಲೆ ಎಸ್‌ಐಟಿ ರಚನೆ ಮಾಡಿರುವುದಕ್ಕೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಮುಡಾ ಸೈಟ್ ವಾಪಸ್ ಕೊಡಲಿಲ್ವಾ? ನೀವು ಅಧಿವೇಶನದಲ್ಲಿ 63 ಕೋಟಿ ರೂ. ಕೇಳಿದ್ರಿ ನಿಮಗೆ ಯಾವ ನೈತಿಕತೆ ಇದೆ? ವರ್ಗಾವಣೆ ದಂಧೆಯಲ್ಲಿ ಹಗಲುದರೋಡೆ ಮಾಡಿದ್ದೀರಾ. ಯಾದಗಿರಿಯಲ್ಲಿ ಪಿಎಸ್‌ಐ ಸಾವು ಆಯ್ತು. ಬೆಳಗಾವಿಯಲ್ಲಿ ಎಸ್‌ಡಿಎ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಸಿದ್ದರಾಮಯ್ಯನವರೇ ಭ್ರಷ್ಟಾಚಾರಕ್ಕೆ ಇದಕ್ಕಿಂತಲೂ ಬೇರೆ ಉದಾಹರಣೆ ಬೇಕಾ? ಎಸ್‌ಐಟಿ ಅಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೆಷನ್ ಟೀಮ್ ಎಂದು ಹೇಳಿದರು.