ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು, ಹೆಸರು ದುರ್ಬಳಕೆ ಬೇಡ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡಎಂದು ತಿಳಿಸಿದರು.

ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ ಎಂದು ತಿಳಿಸಿದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!