September 11, 2026
Friday, September 11, 2026
spot_img

ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ದರಾಮಯ್ಯ ಸಿದ್ಧ: ಕೆಎನ್.ರಾಜಣ್ಣ ಸ್ಫೋಟಕ ಹೇಳಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಸುದ್ದಿ ಭಾರೀ ಸದ್ದು ಮಾಡುತ್ತಿದ್ದು, ಈ ಸಂಬಂಧ ಮಾಜಿ ಸಚಿವ ಕೆಎನ್ ರಾಜಣ್ಣ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಮುಂದೆ ಮಾತನಾಡಿದ ಅವರು, 2013-18 ರ ಸಿದ್ದರಾಮಯ್ಯಗೂ ಈಗಿನ 2023-28 ಸಿದ್ದರಾಮಯ್ಯಗೂ ಬಹಳ ವ್ಯತ್ಯಾಸ ಇದೆ. ಹೀಗಾಗಿ ಅವರು ರಾಹುಲ್ ಗಾಂಧಿ ಸೂಚನೆ ಪಾಲನೆ ಮಾಡುತ್ತಾರೆ ಎಂದು ತಿಳಿಸಿದರು.

ಹಿಂದೆ ಸಿದ್ದರಾಮಯ್ಯ ಅಂದರೆ ದೃಢವಾಗಿ ಇರುತ್ತಿದ್ದರು. ಆದರೆ ಈಗ ಅವರು ಅಧಿಕಾರ ಮುಂದುವರಿಸಲು ಮತ್ತು ಪದತ್ಯಾಗ ಎರಡಕ್ಕೂ ಸಿದ್ಧರಾಗಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕಿದೆ. ಇಲ್ಲಿ ಗೊಂದಲ ಬಗೆಹರಿದರೆ ಉತ್ತಮ. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಅವರು ಏನು ನಿರ್ಧರಿಸುತ್ತಾರೆ ಎಂದು ನೋಡೋಣ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !