ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ವಾಟ್ಸಾಪ್ ಚಾನೆಲ್ ಆರಂಭಿಸಿದ್ದಾರೆ. ಇಡೀ ದೇಶದಲ್ಲಿ ವಾಟ್ಸಾಪ್ ಚಾನೆಲ್ ಆರಂಭಿಸಿದ ಮೊದಲ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ. ಮೆಟಾ ಕಂಪನಿ ಕಳೆದ ವಾರವಷ್ಟೇ ವಾಟ್ಸಾಪ್ ಚಾನೆಲ್ ಆರಂಭಿಸಿದೆ.
ಈಗಾಗಲೇ ಸಿಎಂ ಚಾನೆಲ್‌ಗೆ ಸಾರ್ವಜನಿಕರು ಸೇರಿಕೊಂಡಿದ್ದು, 55 ಸಾವಿರಕ್ಕೂ ಹೆಚ್ಚು ಮಂದಿ ಚಾನೆಲ್‌ನಿಂದ ಅಪ್ಡೇಟ್ ಪಡೆಯುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನಿಮ್ಮ ಮೊಬೈಲ್‌ನ ಒಂದೇ ಕ್ಲಿಕ್‌ನಲ್ಲಿ ನಮ್ಮ ಸರ್ಕಾರದ ಯೋಜನೆಗಳು ತಲುಪಲಿವೆ. ಇದಕ್ಕಾಗಿ ಚಾನೆಲ್ ಆರಂಭಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
https://x.com/CMofKarnataka/status/1704475846785057189?s=20