ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ನಡೆಯನ್ನು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ಧರಾಮಯ್ಯ ಸದನದ ಬಾಗಿಲನ್ನೇ ಒದ್ದಿದ್ದರು. ಆಗ ಅವರನ್ನು ಅಮಾನತು ಮಾಡಲಾಗಿತ್ತೇ? ಪೇಪರ್ ಹರಿದು ಹಾಕೋದು ಈಗ ಕಾಮನ್ ಆಗಿಬಿಟ್ಟಿದೆ. ಸ್ಪೀಕರ್ ಪೀಠಕ್ಕೆ ಹೋಗಿ ಅವರಿಗೆ ದೈಹಿಕವಾಗಿ ಹಲ್ಲೆ ಮಾಡಿದ್ದರೆ ಅಮಾನತು ಮಾಡಬಹುದಿತ್ತು. ಆದರೆ ಯಾರದೋ ಮಾತು ಕೇಳಿ ಆರು ತಿಂಗಳು ಅಮಾನತು ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ,
ಸದನದಲ್ಲಿ ಶಿಸ್ತು ಕಾಪಾಡಿಕೊಳ್ಳುವುದು ಸ್ಪೀಕರ್ ಅವರ ಕರ್ತವ್ಯ. ಅಲ್ಲದೇ ಯಾವುದೇ ಸದಸ್ಯರು ಅಶಿಸ್ತು ಪ್ರದರ್ಶಿಸಿದರೆ ಅವರನ್ನು ಸದನದಿಂದ ಅಮಾನತು ಮಾಡುವ ಅಧಿಕಾರ ಕೂಡ ಅವರಿಗಿದೆ. ಆದರೆ ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡಿಸಿದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ನಡೆ ಸರಿಯಲ್ಲ ಎಂದು ಹೇಳಿದರು.