ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ .
ಈ ವೇಳೆ ರಾಜ್ಯದಲ್ಲಿನ ಬರದ ಬಗ್ಗೆ ಮಾತುಕತೆ ನಡೆಸಿದ್ದು, ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.