March 27, 2026
Friday, March 27, 2026
spot_img

ರಾಜ್ಯದ ಇತಿಹಾಸದಲ್ಲೇ ಅತೀ ಹೆಚ್ಚು ಬಜೆಟ್‌ ಮಂಡನೆ ಮಾಡಿದ್ದು ಸಿದ್ದರಾಮಯ್ಯ, ಯಾವೆಲ್ಲ ವರ್ಷದಲ್ಲಿ ಮಂಡನೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಇನ್ನೇನು ಕೆಲವೇ ಸಮಯದಲ್ಲಿ ಈ ವರ್ಷದ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಬಜೆಟ್‌ ಮೂಲಕ ಹೆಚ್ಚು ಬಜೆಟ್‌ ಮಂಡನೆ ಮಾಡಿರುವ ತಮ್ಮದೇ ದಾಖಲೆಯನ್ನು ಮುರಿಯುತ್ತಿದ್ದಾರೆ.

ಸಿದ್ದರಾಮಯ್ಯ ಅವರ ದಾಖಲೆಯ 17ನೇ ಆಯವ್ಯಯದ ಮೇಲೆ ಭಾರೀ ನಿರೀಕ್ಷೆಯಿದೆ. ಇಂದು ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಇದಕ್ಕೂ ಮುನ್ನ ವಿಶೇಷ ಸಚಿವ ಸಂಪುಟದಲ್ಲಿ ಬಜೆಟ್‌ಗೆ ಔಪಚಾರಿಕವಾಗಿ ಅನುಮೋದನೆ ಪಡೆಯಲಿದ್ದಾರೆ.

ಹೆಚ್.ಡಿ. ದೇವೇಗೌಡರು ಹಾಗೂ ಜೆ.ಹೆಚ್. ಪಟೇಲ್ ಆಡಳಿತದಲ್ಲಿ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ ಮೊದಲ ಬಾರಿ 1995-96ನೇ ಸಾಲಿನ ಮುಂಗಡ ಪತ್ರ ಮಂಡಿಸಿದ್ದರು. ಬಳಿಕ 1996-97, 1997-98, 1998-99, 1999-2000, 2004-05, 2005-06ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದರು.

ಬಳಿಕ ಮುಖ್ಯಮಂತ್ರಿಯಾಗಿ 2013-14, 2014-15, 2015-16, 2016-17, 2017-18, 2018-19, ಪ್ರಸಕ್ತ 2023-24, 2024-25, 2025-26 ಸಾಲಿನಲ್ಲಿ ಬಜೆಟ್ ಮಂಡಿಸಿದ್ದಾರೆ. ಸದ್ಯ 2026-27ನೇ ಆಯವ್ಯಯ ಮಂಡಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !