ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ ಸಿದ್ದರಾಮಯ್ಯ..! ಸ್ವಯಂ ನಿವೃತ್ತಿಗೆ ಮುಂದಾದ ಅಧಿಕಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿಯೊಬ್ಬರು ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಮನನೊಂದ ಧಾರವಾಡ ಎಎಸ್‌ಪಿ ನಾರಾಯಣ ಬರಮಣ್ಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ.

ತಮಗಾದ ಅವಮಾನಕ್ಕೆ ಬರಮಣ್ಣಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ಈ ನಡೆಯಿಂದ ಸರ್ಕಾರಕ್ಕೆ ಇದೀಗ ಭಾರಿ ಮುಜುಗರ ಆಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!