ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಿರಿ: ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಖ್ಯಮಂತ್ರಿಯವರಿಗೆ ರಾಜೀನಾಮೆ ಕೊಡುವುದೊಂದೇ ದಾರಿ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ (BJP) ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ. ‘ಸತ್ಯಮೇವ ಜಯತೇ’ ಎಂದು ನುಡಿದರು.

ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದೇ ಸಂವಿಧಾನಬಾಹಿರ, ಅಪರಾಧ ಎಂದು ಆರೋಪಿಸಿದ ಕಾಂಗ್ರೆಸ್ಸಿಗರು, ಸಾರ್ವಜನಿಕವಾಗಿ ಕ್ಷಮೆ ಯಾಚನೆ ಮಾಡಬೇಕು. ಒಂದು ಸಾಂವಿಧಾನಿಕ ಹುದ್ದೆಯನ್ನು ಅಗೌರವಿಸಿದ ಕಾರಣಕ್ಕೋಸ್ಕರ ಸಾರ್ವಜನಿಕ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳಿಗೆ ಬೇರೆ ದಾರಿ ಉಳಿದಿಲ್ಲ. ಅವರು ಕಾನೂನು ಪಂಡಿತರು. ಸಿಂಪಲ್ ಚೀಫ್ ಮಿನಿಸ್ಟರ್, ಕಾಸ್ಟ್ಲಿ ಲಾಯರನ್ನು ಕರೆಸಿ ವಾದ ಮಂಡಿಸಿದ್ದರು. ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್‌ಗಳೆಲ್ಲರೂ ಕಾಸ್ಟ್ಲಿ. ಅವರೆಲ್ಲರೂ ವಾದ ಮಾಡಿದ್ದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಾಗಿಲ್ಲ. ಇನ್ನೆಲ್ಲಿಗೆ ಹೋದರೂ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಗೆಲ್ಲುವುದಿಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆಪಾಟಲಿಗೆ ಈಡಾಗುತ್ತೀರಿ ಎಂದು ಎಚ್ಚರಿಸಿದರು.

ನೀವೂ ಸತ್ಯಕ್ಕೆ ಜೈ ಎನ್ನಿ. ರಾಜೀನಾಮೆ ಕೊಡುವುದೊಂದೇ ನಿಮಗಿರುವ ದಾರಿ. ಸಿದ್ದರಾಮಯ್ಯನವರೇ ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಿ. ಈಗ ಮಾಡಿದ್ದೇ ಜಾಸ್ತಿ ಭಂಡತನ. ಇನ್ನೂ ಭಂಡತನ. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಿರಿ ಎಂದು ತಿಳಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!