October 18, 2026
Sunday, October 18, 2026
spot_img

ಸಿದ್ದರಾಮಯ್ಯ ರಾಜೀನಾಮೆ: ‘ಕೈ’ ಹೈಕಮಾಂಡ್ ವಿರುದ್ಧ ಕುರುಬ ಸಮಾಜದ ಮುಖಂಡರ ಪ್ರತಿಭಟನೆ

ಹೊಸದಿಗಂತ ವರದಿ ವಿಜಯಪುರ:

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯಗೆ ಒತ್ತಡ ಹೇರಿದನ್ನು ಖಂಡಿಸಿ, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಕುರುಬ ಸಮಾಜ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಲು ಒತ್ತಡ ಹಾಕಲಾಗಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಮೊಳಗಿಸಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ:

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಹಾಗೂ ಅವರ ಅಹಿಂದ ಬೆಂಬಲವೇ ಕಾರಣ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೇ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಕುರುಬ ಸಮಾಜದ ಮುಖಂಡ ಮಲ್ಲಿಕಾರ್ಜುನ ಸಾವಳಸಂಗ, ಪ್ರಕಾಶ ಹಿರೇಕುರುಬರ, ನಿಂಗಣ್ಣ ಬಿಸನಾಳ, ಸಿದ್ದು ಕರಿಗೊಂಡ, ರಮೇಶ ಚಿನ್ನಾಕರ, ಯಲ್ಲು ಬಮ್ಮನಹಳ್ಳಿ, ಪೀರು ಕೆರೂರ ಇದ್ದರು.

Must Read