ಹೊಸದಿಗಂತ ಡಿಜಿಟಲ್ ಡೆಸ್ಕ್:
5 ವರ್ಷ ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇವೆ ಅಷ್ಟೆ. ನಾನು ಯಾವತ್ತೂ ಏನೂ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.
ಇತ್ತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೈಕಮಾಂಡ್ ನೀಡಿರುವ ಸೂಚನೆ ಚಿಕ್ಕವರಿಂದ ಹಿಡಿದು ದೊಡ್ಡ ನಾಯಕರವರೆಗೆ ಅನ್ವಯವಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದರು.