Saturday, August 13, 2022

Latest Posts

ರಾಜ್ಯ ಸರ್ಕಾರದ ಅವೈಜ್ಞಾನಿಕ ಲಾಕ್ ಡೌನ್: ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ ಎಂದ ಸಿದ್ದರಾಮಯ್ಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾಗಿಂತಲೂ ರಾಜ್ಯ ಸರ್ಕಾರದ ಅವೈಜ್ಞಾನಿಕ, ಜನ ವಿರೋಧಿ ಕ್ರಮಗಳಿಂದ ಸಾರ್ವಜನಿಕರು ಬೇಸತ್ತಿದ್ದು, ಗೊಂದಲದ ಗೂಡಾಗಿರುವ ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಲಾಕ್ ಡೌನ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಬೆಳಗ್ಗೆ 6 ರಿಂದ 10 ರವರೆಗೆ ದಿನಸಿ, ತರಕಾರಿ, ಮೀನು ಮಾಂಸ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ, ವಾಹನ ಸಂಚಾರ ನಿರ್ಬಂಧಿಸಿ, ನಡೆದುಕೊಂಡೇ ಹೋಗಬೇಕು ಎಂಬ ನಿಯಮ ಮೂರ್ಖತನದ ಪರಮಾವಧಿ, ಹಳ್ಳಿಗಳಿಂದ ಐದರಿಂದ ಹತ್ತಾರು ಕಿ.ಮೀ ದೂರದ ಪಟ್ಟಣದ ಮಾರುಕಟ್ಟೆಗೆ ನಿಗದಿತ ಅವಧಿಯಲ್ಲಿ ನಡೆದುಕೊಂಡು ಹೋಗಿ ಬರುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಹಿರಿಯರು, ಅಶಕ್ತರು ದಿನನಿತ್ಯ ಹೊರಗೆ ತೆರಳುವುದು ಕಷ್ಟವಾಗಲಿದೆ.
ಗ್ರಾಮೀಣ ಭಾಗದಲ್ಲಿ ಬ್ಯಾಂಕ್, ಎಟಿಎಂ, ಹೋಟೆಲ್ ಎಲ್ಲವೂ ಬಾಗಿಲು ತೆರೆಯುವುದೇ ನಿಧಾನವಾಗಿ, ಎಲ್ಲಾ ನಿಯಮಗಳನ್ನು ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಮಾಡಿದಂತೆ ಇದೆ, ಅಧಿಕಾರಿಗಳು ಮೊದಲು ಹಳ್ಳಿಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿ ಅರಿಯಲಿ ಎಂದರು.
ಸರ್ಕಾರ ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಜೊತೆಗೆ ಬೆಳೆ, ಅಡುಗೆ ಎಣ್ಣೆ, ಮುಂತಾದ ದಿನಸಿ ಪದಾರ್ಥಗಳುಳ್ಳ ಕಿಟ್‍ಗಳನ್ನು ನೀಡಬೇಕು. ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೆ ಮೊದಲಿಗೆ ರೂ.10,000 ಗಳನ್ನು ನೀಡಬೇಕು. ನಂತರ ತಿಂಗಳಿಗೆ ರೂ.6,000 ಗಳನ್ನು ನೀಡಬೇಕು. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಡ್ರೈವರುಗಳಾದಿಯಾಗಿ ಎಲ್ಲ ದುಡಿಯುವ ವರ್ಗಗಳಿಗೆ ರೂ.10,000 ಗಳನ್ನು ನೀಡಬೇಕು. ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜ ಅನ್ನು ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss