ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ತಡೆಹಿಡಿದ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಹಿಂದಿನ ಬಿಜೆಪಿ ಸರ್ಕಾರದ (BJP Govt) ಅವಧಿಯ ಎಲ್ಲಾ ಕಾಮಗಾರಿಗಳ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ (Siddaramaiah) ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ತಡೆ ನೀಡಿದೆ.

ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ, ಪಾವತಿಗೆ ತಕ್ಷಣದಿಂದ ತಡೆ ನೀಡಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.ಇನ್ನಷ್ಟೇ ಆರಂಭವಾಗಬೇಕಿರುವ ಕಾಮಗಾರಿಗಳನ್ನೂ ತಡೆಹಿಡಿಯುವಂತೆ ಆದೇಶಿಸಲಾಗಿದೆ.

ಈಗಾಗಲೇ ಹಿಂದಿನ ಸರ್ಕಾರದ ನಿಗಮ ಮಂಡಳಿ ಅಧ್ಯಕ್ಷರ ನಾಮನಿರ್ದೇಶನವನ್ನೂ ರದ್ದುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!