ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ತೊಗರಿ ಬೆಳೆಗಾರರಿಗೆ ಶುಭಸುದ್ದಿ ನೀಡಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದ್ದು, ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹಧನ ನೀಡುವುದಾಗಿ ಸರ್ಕಾರ ತಿಳಿಸಿದೆ. ಸರ್ಕಾರ ಈ ನಿರ್ಧಾರದಿಂದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ.