BIG NEWS | ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪದಗ್ರಹಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಸಿದ್ದರಾಮಯ್ಯ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ʻಸಿದ್ದರಾಮಯ್ಯ ಎಂಬ ಹೆಸರಿನವನಾದ ನಾನು ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯವನ್ನು ಶ್ರದ್ಧಾಪೂರಕವಾಗಿ ನಿರ್ವಹಿಸುತ್ತೇನೆಂದು ಭಯ ಪಕ್ಷ ಪಾತವಿಲ್ಲದೆ ರಾಗ-ದ್ವೇಷವಿಲ್ಲದೆ ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ ಕರ್ತವ್ಯ ನಿರ್ವಹಿಸುವುದಾಗಿದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆʼ ಎಂದು ಹೇಳಿದ್ದಾರೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಸಿಎಂ ಸುಖ್ವೀಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ಎನ್. ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹಾಗೂ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಈ ಬೃಹತ್ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ 30 ಮಂದಿ ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಇನ್ನು ಶಾಸಕರು, ಅವರ ಕುಟುಂಬ, ವಿವಿಐಪಿ ಹಾಗೂ ಹಿರಿಯರಿಗೆ ವೇದಿಕೆಯ ಮುಂಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗಾಗಿ ಸ್ಟೇಡಿಯಂ ಮಧ್ಯಭಾಗದಲ್ಲಿ 40ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!