ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಒಟ್ಟು 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಚ್ಚರಿ ಎನ್ನುವಂತೆ ಬಿಜೆಪಿ ಇಬ್ಬರು ಹಿರಿಯ ನಾಯಕರಾದ ವಿ. ಸೋಮಣ್ಣ ಹಾಗೂ ಆರ್.ಅಶೋಕ್ ಅವರಿಗೆ ಕಾಂಗ್ರೆಸ್ ಕಲಿಗಳ ವಿರುದ್ಧ ಹೋರಾಡುವ ಜವಾಬ್ದಾರಿ ನೀಡಲಾಗಿದೆ.
ವಿ. ಸೋಮಣ್ಣ ಅವರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಕ್ಷೇತ್ರವಾಗಿರುವ ವರುಣಾದಲ್ಲಿಯೂ ಸ್ಪರ್ಧೆ ಮಾಡುವಂತೆ ಸೂಚಿಸಲಾಗಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಸ್ಪರ್ಧೆ ಮಾಡುವಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಸೂಚಿಸಲಾಗಿದೆ. ಅದರೊಂದಿಗೆ ಅವರು ಪದ್ಮನಾಭನಗರ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡಲಿದ್ದಾರೆ.