Friday, July 1, 2022

Latest Posts

ಚಡ್ಡಿ ಹಾಕುವ ಎಲ್ಲರನ್ನೂ ಸಿದ್ದರಾಮಯ್ಯ ಅಪಮಾನಿಸಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌  
“ಚಡ್ಡಿ ಹಾಕುವವರು ಮಿಲಿಟರಿಯಲ್ಲಿ, ಪೊಲೀಸ್ ವ್ಯವಸ್ಥೆಯಲ್ಲೂ ಹಿಂದೆ ಇದ್ದರು. ಕರ್ಮಚಾರಿಗಳೂ ಚಡ್ಡಿ ಹಾಕುತ್ತಾರೆ. ರೈತರೆಲ್ಲರೂ ಚಡ್ಡಿ ಧರಿಸುತ್ತಾರೆ. ಚಡ್ಡಿ ಹಾಕುವ ಎಲ್ಲರನ್ನೂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ” ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಮಂಗಳವಾರ “ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಅವರ ಮನೆಗೆ ತಲುಪಿಸುವ ಆಂದೋಲನ”ವೇ ನಡೆಯಿತು. ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದ ಗಾಂಧಿ ಭವನದಿಂದ ಸಿದ್ದರಾಮಯ್ಯರವರ ಮನೆಗೆ ತೆರಳುವ ಕಾರ್ಯಕ್ರಮ ಇದಾಗಿತ್ತು.
ಚಡ್ಡಿ ತಯಾರಿಕೆ ಹಿಂದಿನ ಶ್ರಮವನ್ನು ಸಿದ್ದರಾಮಯ್ಯ ತಿಳಿಯಲಿ. ಚಡ್ಡಿ ಸುಟ್ಟರೂ ಮಾಲಿನ್ಯ ಉಂಟಾಗುತ್ತದೆ. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯಲಿ ಎಂದೂ ಈ ಸಂದರ್ಭದಲ್ಲಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss