Wednesday, June 29, 2022

Latest Posts

ರಾಜಕೀಯ ಕಾರ್ಯತಂತ್ರಕ್ಕಾಗಿ ಮೂರು ದಿನಗಳ ಕಾಲ ರೆಸಾರ್ಟ್ ಮೊರೆ ಹೋದ ಸಿದ್ದರಾಮಯ್ಯ

ಹೊಸದಿಗಂತ ವರದಿ,ಮೈಸೂರು:

ರಾಜ್ಯದಲ್ಲಿ ಅನೇಕ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕಾರ್ಯತಂತ್ರ ರೂಪಿಸುವುದಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ವಿಶ್ರಾಂತಿಯ ನೆಪದಲ್ಲಿ ರೆಸಾರ್ಟ್ ಮೊರೆ ಹೋಗಿದ್ದಾರೆ. ತಮ್ಮ ಪರಮಾಪ್ತ ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯುತ್ತಿರುವುದು ಸೇರಿದಂತೆ ಅನೇಕ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ನಡುವೆಯೂ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಾರಾಪುರ ಲಾಡ್ಜ್ ರೆಸಾರ್ಟ್ಗೆ ತೆರಳಿದ್ದಾರೆ. ಅಲ್ಲಿಂದ ಅವರು ಸ್ವಲ್ಪ ಸಮಯಗಳ ಕಾಲ ವಿಶ್ರಾಂತಿ ಪಡೆದು ಕಬಿನಿ ಜಲಾಶಯ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೋಟ್ ಮೂಲಕ ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್ಗೆ ತೆರಳಿದ್ದಾರೆ.
3 ದಿನಗಳ ವಿಶ್ರಾಂತಿಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗಿಯಾಗಿ ನಂತರ ಫೆಬ್ರವರಿ 2 ರಂದು ಬೆಂಗಳೂರಿಗೆ ತೆರಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss