ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಿ, ಸಿದ್ದರಾಮಯ್ಯ ಇನ್ನೂ ಮೂರೂವರೆ ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನ ಮಹಾರಾಜ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಯಾರೂ ಒತ್ತಾಯಿಸಲು ಸಾಧ್ಯವಿಲ್ಲ. ಹೈಕಮಾಂಡ್ ಕೂಡ ಅಂತಹ ಅಭಿಪ್ರಾಯ ಹೊಂದಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಾಗಿ ಬಾಂಡ್ ಮೇಲೆ ಬರೆದುಕೊಟ್ಟಿದ್ದಾರಾ? ಮುಂದಿನ ಮೂರೂವರೆ ವರ್ಷ ವರ್ತಕನಾಗಿ ಕೆಲಸ ಮಾಡುತ್ತೇನೆ. ಹೈಕಮಾಂಡ್ ಸಂಪೂರ್ಣವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಈ ಬಗ್ಗೆ ನನಗೂ ಮಾಹಿತಿ ಸಿಕ್ಕಿದೆ. ಸಿಎಂ ಸ್ಥಾನಕ್ಕಾಗಿ ಯಾರು ಸಹ ನಮ್ಮಲ್ಲಿ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು ಹೇಳಿದರು.