ಹೊಸದಿಗಂತ ಕೊಪ್ಪಳ:
ಉಳಿದ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.
ಬಸಾಪುರ ಗ್ರಾಮದ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಉಳಿದ ಅವಧಿಗೂ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಹೇಳಿದ್ದಾರೆ.