ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ವಾರದಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ, ಸರ್ಕಾರ ಉರುಳುತ್ತದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಮಾಧ್ಯದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಇನ್ನೊಂದು ವಾರ ಇರುವುದು ಕಷ್ಟ. ಒಂದು ವಾರದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಸರ್ಕಾರ ಉರುಳುತ್ತದೆ. ಈ ಸರ್ಕಾರ ರಾಜ್ಯದಲ್ಲಿ ಇರಲು ಸಾಧ್ಯವಿಲ್ಲ. ಯಾಕೆಂದರೆ ಇದು ಪಾಪದ ಸರ್ಕಾರ. ಜನರಿಗೆ ಸುಳ್ಳು ಹೇಳಿ, ವಂಚನೆ ಮಾಡಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.