ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ, ಅವನ ಗ್ರಹಚಾರ ಚೆನ್ನಾಗಿತ್ತು, ಅದಕ್ಕೆ ಸಿಎಂ ಆಗಿ ಬಿಟ್ಟ ಎಂದು ಹಿರಿಯ ಶಾಸಕ ಬಿ.ಆರ್ ಪಾಟೀಲ್ ಹೇಳಿರುವ ವಿಡಿಯೋವೊಂದು ಇದೀಗ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ವಿಡಿಯೋದಲ್ಲಿ, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಸಿಎಂಗೆ ಸೋನಿಯಾ ಗಾಂಧಿಯನ್ನು ಮೊದಲು ಭೇಟಿ ಮಾಡಿಸಿದವನೇ ನಾನೇ. ಆದರೆ ಅವನ ಗ್ರಹಚಾರ ಚೆನ್ನಾಗಿತ್ತು. ಅವನು ಸಿಎಂ ಆಗಿಬಿಟ್ಟ ಎಂದು ಹೇಳಿಕೊಂಡಿದ್ದಾರೆ.
ವಸತಿ ಗೋಲ್ಮಾಲ್ ಬಗ್ಗೆ ಆಡಿಯೋ ವೈರಲ್ ಆದ ಬಳಿಕ ಅದು ನನ್ನದೇ ಆಡಿಯೋ ಎಂದು ಒಪ್ಪಿಕೊಂಡಿದ್ದರು. ಇದೀಗ ಬಿ.ಆರ್ ಪಾಟೀಲ್ ಅವರು ಒಂದೊಂದೇ ವಿಚಾರವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ.