Sunday, February 28, 2021

Latest Posts

ಕೊಡವರ ಧಾರ್ಮಿಕ ಭಾವನೆಗೆ ಧಕ್ಕೆ: ಸಿದ್ದರಾಮಯ್ಯ ಪ್ರಕರಣ ಮೈಸೂರು ಪೊಲೀಸ್ ಠಾಣೆಗೆ ವರ್ಗಾವಣೆ

ಹೊಸ ದಿಗಂತ ವರದಿ, ಮೈಸೂರು:

ಕೊಡವರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವು ಇದೀಗ ಮೈಸೂರು ಅಶೋಕಪುರಂ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದೆ.
ಕಳೆದ ವರ್ಷ ಡಿಸೆಂಬರ್ 18ರಂದು ಮೈಸೂರಿನ ಅರವಿಂದ ನಗರದ ಕಾಲಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಕೊಡವರು ಸಹ ದನದ ಮಾಂಸವನ್ನು ತಿನ್ನುತ್ತಾರೆ ಎಂದು ಹೇಳಿದ್ದರು. ಹೀಗೆ ಹೇಳಿರುವುದು ಕೊಡವ ಜನಾಂಗದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ. ಉದ್ದೇಶಪೂರ್ವಕವಾಗಿ ಪ್ರಚೋದನಾ ಭಾಷಣ ಮಾಡಿದ್ದಾರೆಂದು ಆರೋಪಿಸಿ ಶಾಂತಿಯೇoಡ ರವಿ ಕುಶಾಲಪ್ಪ ಎಂಬವರು ಐಪಿಸಿ ಸೆಕ್ಷನ್ 153ರಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ
ಘಟನೆಯು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಪ್ರಕರಣವನ್ನು ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಈ ಕುರಿತು ತನಿಖೆ ಆರಂಭಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!