ಸಚಿವರಾಗಲು ಸಿದ್ದರಾಮಯ್ಯರ ಸರ್ಟಿಫಿಕೇಟ್​ ಬೇಕಿಲ್ಲ: ಸಚಿವ ಸುಧಾಕರ್ ತಿರುಗೇಟು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಾವು ಸಚಿವರಾಗಬೇಕೇ ಬೇಡವೇ ಎಂಬುದನ್ನು ನಿರ್ಧರಿಸುವುದು ರಾಜ್ಯದ ಜನತೆ ಮತ್ತು ನಮ್ಮ ಪಕ್ಷದ ಸರ್ಕಾರವೇ ಹೊರತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲ. ತಮ್ಮ ಅರ್ಹತೆ ಬಗ್ಗೆ ಸಿದ್ದರಾಮಯ್ಯ ಅವರ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯನವರಿಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿರುಗೇಟು ನೀಡಿದ್ದಾರೆ.

ಚಿತ್ರಾವತಿ ಸುಬ್ರಹ್ಮಣ್ಯೇಶ್ವರ ಜಾತ್ರೆಗೆ ಶುಕ್ರವಾರ ಚಾಲನೆ ನೀಡಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಹೇಳಿದ ಕಾರಣಕ್ಕೆ ತಮ್ಮನ್ನು ಸಚಿವರನ್ನಾಗಿ ಮಾಡಿಲ್ಲ. ನಮ್ಮ ಪಕ್ಷದ ಸರ್ಕಾರ, ನಮ್ಮ ಮುಖ್ಯಮಂತ್ರಿ ಮತ್ತು ಈ ರಾಜ್ಯದ ಜನತೆ ತಮ್ಮನ್ನು ಸಚಿವರನ್ನಾಗಿ ಮಾಡಿದ್ದಾರೆ. ಜನತಾದಳದಲ್ಲಿದ್ದಾಗ ಯಾಕೆ ಇವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿರಿಯ ನಾಯಕ ಪರಮೇಶ್ವರ್ ಅವರನ್ನು ಯಾಕೆ ಮೂಲೆಗುಂಪು ಮಾಡಿದರು ಎಂಬ ಬಗ್ಗೆಯೂ ಪ್ರಶ್ನೆಗಳಿದ್ದು, ದಲಿತ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಮೊದಲಿನಿಂದಲೂ ಇದೆ. ದಲಿತರ ಮತ ಪಡೆಯುತ್ತಾರೆ. ಅವರಿಗೆ ನ್ಯಾಯ ಒದಗಿಸಿಲ್ಲ ಎಂಬ ಆರೋಪಗಳೂ ಇವೆ ಎಂದು ಹೇಳಿದರು.

ಕಾಂಗ್ರೆಸ್ ನವರು ಸತತವಾಗಿ ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಾವು ರಾಜಕೀಯವಾಗಿ ಬೆಳೆಯುತ್ತಿರುವ ಕಾರಣ ತಮ್ಮ ಬಗ್ಗೆ ಅವರಿಗೆ ಭಯ ಇದೆ. ಈ ಭಾಗದಲ್ಲಿ ಏನಾಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ ಅವರು ಸತತ ಸುದ್ದಿಗೋಷ್ಠಿಗಳ ಮೂಲಕ ತಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!