July 18, 2026
Saturday, July 18, 2026
spot_img

ಸಿದ್ದರಾಮಯ್ಯಗೆ ಕುರ್ಚಿಯೇ ಮುಖ್ಯ, ಜನಹಿತವಲ್ಲ: ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಡುವ ವ್ಯಕ್ತಿಯಲ್ಲ, ಇದು ಅವರ ಜಾಯಮಾನದಲ್ಲೇ ಬಂದಿದೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಅವರ ಇತ್ತೀಚಿನ ಟ್ವೀಟ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಹರಿಹಾಯ್ದರು.

ರಾಜ್ಯದ ಜನತೆ ಅಥವಾ ಅಹಿಂದ ವರ್ಗದ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿಲ್ಲ. ಬದಲಿಗೆ ಅವರಿಗೆ ಕುರ್ಚಿ ಮತ್ತು ಅಧಿಕಾರವಷ್ಟೇ ಮುಖ್ಯವಾಗಿದೆ.

ಜೆಡಿಎಸ್‌ನಲ್ಲಿದ್ದಾಗಲೂ ಕುರ್ಚಿಗಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು. ಅಂದು ಅವರು ನಡೆದುಕೊಂಡ ರೀತಿಗೆ ನಾವು ಅನಿವಾರ್ಯವಾಗಿ ನಿರ್ಧಾರ ಕೈಗೊಳ್ಳಬೇಕಾಯಿತು.

ತಮಗೆ ಆಶ್ರಯ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಈಗ ಸಂಪೂರ್ಣವಾಗಿ ಆವರಿಸಿಕೊಂಡಿದ್ದಾರೆ. ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗುಂಪು ಮಾಡಿ, “ನಾನಿದ್ದರೆ ಮಾತ್ರ ಕಾಂಗ್ರೆಸ್” ಎಂಬ ವಾತಾವರಣ ಸೃಷ್ಟಿಸಿದ್ದಾರೆ.

ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಬಿಡಬಾರದು ಎಂಬ ಉದ್ದೇಶದಿಂದಲೇ ಹೊಸ ಹೊಸ ವಾದಗಳನ್ನು ಮುಂದಿಡುತ್ತಿದ್ದಾರೆ ಎಂದು ಕುಮಾರಸ್ವಾಮಿ ದೂರಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !