ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ. ತಡವಾಗಿ ಜ್ಞಾನೋದಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದರು.