ಸಿದ್ದರಾಮಯ್ಯನವರದ್ದು ಅಂತಿಂತ ಸರ್ಕಾರ ಅಲ್ಲ ಜನರ ರಕ್ತ ಹೀರುವ ಸರ್ಕಾರ: ಛಲವಾದಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ. ಆದರೆ, ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ಕಾಂಗ್ರೆಸ್ ಸರ್ಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ, ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ. ಒಂದು ಕಡೆ ಕೊಟ್ಟಂತಿರಬೇಕು. ಆದರೆ, ಅದು ಕೈ ಸೇರಬಾರದು ಇದು ನಿಮ್ಮ ಸರ್ಕಾರದ ದುರುದ್ದೇಶ, ದಲಿತರನ್ನು ನಿರಂತರ ವಂಚಿಸುತ್ತ ಬಂದ ಸರ್ಕಾರ ಇದೀಗ ಅಲ್ಪಸಂಖ್ಯಾತರನ್ನೂ ವಂಚಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!