ಸಿದ್ದರಾಮಯ್ಯ ಸರ್ಕಾರ ಇದ್ದೂ ಸತ್ತಂತೆ: ವಿ. ಸೋಮಣ್ಣ

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅಂತಾಗಿದ್ದು, ಸಿದ್ದರಾಮಯ್ಯ ಸರ್ಕಾರ ಇದ್ದು ಸತ್ತ ಹಾಗೇ ಆಗಿದೆ.‌ ಉಪಚುನಾವಣೆ ಬಳಿಕ ಸರ್ಕಾರ ಉಳಿಯುವುದೋ ಎಂಬ ನಂಬಿಕೆ‌ ಇಲ್ಲ ಎಂದು ಕೇಂದ್ರದ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಅದು ತನ್ನದೆಯಾದ ಕೆಲಸ ಮಾಡುತ್ತದೆ. ಆದರೆ ಹಿಂದಿನ ಸಿದ್ದರಾಮಯ್ಯ ಈಗ ಉಳಿದಿಲ್ಲ. ಅವರಿಂದ ರಾಜ್ಯಕ್ಕೆ ಒಳಿತಾಗಲಿದೆ ಎಂಬ ವಿಶ್ವಾಸ ಇಲ್ಲ ಎಂದರು.

ಈ ಉಪ ಚುನಾವಣೆಯಲ್ಲಿ ಸರ್ಕಾರದ ಆಟಾಟೋಪ ನಡೆಯಲ್ಲ. ಜನ ರಾಜ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ. ವಕ್ಫ್ ಸಚಿವ ಜಮೀರ ಅಹ್ಮದರು ರಾಜ್ಯಕ್ಕೆ ಜೆಪಿಸಿ ತಂಡ ಆಗಮಿಸುತ್ತಿರುವುದೇ ಅನಧಿಕೃತ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಅವರು ಕಾನೂನು ಅರಿತುಕೊಳ್ಳಲಿ. ಈ ರೀತಿಯಾಗಿ ಏಕೆ ಹೇಳಿಕೆ ಕೊಟ್ಟರೋ ಗೊತ್ತಾಗುತ್ತಿಲ್ಲ. ಅವರಿಗೆ ಮುಸ್ಲಿಮರು ಮಾತ್ರ ಮತ ಹಾಕಿಲ್ಲ. ಎಲ್ಲರೂ ಹಾಕಿದ್ದಾರೆ. ಅವರು ಮೊದಲು ಮಂತ್ರಿ ಕೆಲಸ ಮಾಡಲಿ. ಅದನ್ನು ಬಿಟ್ಟು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ರಾಷ್ಟ್ರಕ್ಕೆ ಬಸವರಾಜ ಬೊಮ್ಮಾಯಿ ಅವಶ್ಯಕತೆ ಇದೆ ಎಂದು ಮೋದಿಯವರು ಅಪೇಕ್ಷೆ ಮೇರೆಗೆ ಅವರು ಸಂಸದರಾಗಿದ್ದು, ಅವರ ಮಗನನ್ನು ಶಿಗ್ಗಾವಿ ಕ್ಷೇತ್ರಕ್ಕೆ ನಿಲ್ಲಿಸಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಧಾನಿ ಮೋದಿಯವರು ಕೈಗೊಂಡ ಕಾರ್ಯಗಳು ಗೆಲುವಿಗೆ ಸಹಕಾರಿ ಆಗಲಿದೆ. ಮೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!