ಸಿದ್ದರಾಮಯ್ಯ ನೇಚರ್ ಬೇರೆ, ಈಗ ಬಹಳ ವೀಕ್ ಆಗಿದ್ದಾರೆ: ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಆದರೆ ಈಗ ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು, ಮೊದಲಿದ್ದ ಸಿದ್ದರಾಮಯ್ಯ (Siddaramaiah) ಬೇರೆ, ಈಗಿನ ಸಿದ್ದರಾಮಯ್ಯವೇ ಬೇರೆ ಎಂದು ಹೇಳಿದ್ದಾರೆ.

ಮೊದಲಿನ ಸಿದ್ದರಾಮಯ್ಯ ನೇಚರ್ ಬೇರೆ, ಆದ್ರೆ ಈಗ ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಕಾಂಗ್ರೆಸ್ ವರಿಷ್ಠರ ಮಾತನ್ನು ಚಾಚೂತಪ್ಪದೆ ಪಾಲಿಸುತ್ತಿದ್ದಾರೆ ಎಂದರು.

ಇಂದುರಾಜ್ಯ ಸರ್ಕಾರದ ರಿಮೋಟ್ ಕಾಂಗ್ರೆಸ್​ ಹೈಕಮಾಂಡ್ ಕೈಯಲ್ಲಿದೆ. ದೆಹಲಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಕಪ್ಪಕಾಣಿಕೆ ಬಗ್ಗೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹೈಕಮಾಂಡ್​ಗೆ ಕಪ್ಪ ಕಾಣಿಕೆ ನೀಡುವುದು ಸಹಜ. ನಿನ್ನೆ ನಡೆದ ಸಭೆಯಲ್ಲೂ ಅದು ಮತ್ತೆ ಮುಂದುವರಿದಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ಬಗ್ಗೆ ನಮ್ಮ ಅಭ್ಯಂತರ ಇಲ್ಲ. ಆದರೆ ಸಚಿವ ಸಂಪುಟವೇ ಹೋಗಿ ಸಭೆ ಮಾಡುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದರು. ಈ ಹಿಂದೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅಧಿಕಾರಗಳ ಜೊತೆ ಸಭೆ ಮಾಡಿದ್ದರು. ರಾಜ್ಯದ ಜನರು ಸ್ಪಷ್ಟ ಬಹುಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಕರ್ನಾಟಕದ ಜನರಿಗೆ ಇದು ಅವಮಾನ ಮಾಡಿದಂತಾಗುತ್ತದೆ ಎಂದರು.

ರಾಜ್ಯ ಸರಕಾರದಲ್ಲಿ ಹೊಂದಾಣಿಕೆ ಇಲ್ಲ ಅನಿಸುತ್ತದೆ. ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಹಗಲು‌ ದರೋಡೆ ನಡೆಯುತ್ತಿದೆ. ತಮ್ಮ ಪಕ್ಷದ ಶಾಸಕರೇ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರ ಸ್ಪಷ್ಟವಾಗಿ ಕಾಣುತ್ತಿದೆ, ಅಭಿವೃದ್ಧಿ ಮೇಲೆ ಪೆಟ್ಟು ಬೀಳುತ್ತಿದೆ. ಆಡಳಿತ ವೈಫಲ್ಯ ನೋಡುತ್ತಿದ್ದೇವೆ. ಸರ್ಕಾರದ ಪ್ರತಿ ವಿಚಾರದಲ್ಲೂ ಕಾಂಗ್ರೆಸ್ ಹೈಕಮಾಂಡ್ ಹಸ್ತಕ್ಷೇಪ ಮಾಡುತ್ತಿದೆ. ದೆಹಲಿಯಿಂದಲೇ ರಾಜ್ಯ ಸರ್ಕಾರದ ರಿಮೋಟ್ ಕಂಟ್ರೋಲ್ ಆಗುತ್ತಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!