ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸು: ಸಾರಿಗೆ ಸಚಿವ ಶ್ರೀರಾಮುಲು

ಹೊಸದಿಗಂತ ವರದಿ ಮಂಗಳೂರು:‌

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸಾಗಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಲು ಹೇಳಿದ್ದಾರೆ. ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಬಿಜೆಪಿಯನ್ನು ಕಿತ್ತೆಸೆಯೋಕೆ‌‌ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ..? ಬಿಜೆಪಿ ರಾಜ್ಯದಲ್ಲಿ ದೇಶದಲ್ಲಿ ಆಲದ ಮರವಾಗಿ ಬೆಳೆದಿದೆ. ಬಿಜೆಪಿ ಕಾರ್ಮಿಕ ವರ್ಗಕ್ಕೆ ಶಕ್ತಿಯನ್ನು ತುಂಬಿದೆ ಎಂದು ಪ್ರತ್ಯುತ್ತರ ನೀಡಿದರು.

ಪ್ರಧಾನಿ ಮೋದಿ ದೇಶಕ್ಕೆ ಸಮರ್ಥ ನಾಯಕರಾಗಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಯಾರಿಗೂ ಬೇಡವಾದ ಪಕ್ಷವಾಗಿದೆ. ಐವತ್ತು ವರ್ಷವನ್ನು ಆಳಿದ ಕಾಂಗ್ರೆಸ್ ಪಕ್ಷವನ್ನು ದೇಶ ತಿರಸ್ಕಾರ ಮಾಡಿದೆ. 2023ರಲ್ಲಿ ಜನ ಆಲದಮರಕ್ಕೆ ನೀರೆರೆಯುವ ಮೂಲಕ ಮತ್ತಷ್ಟು ಎತ್ತರಕ್ಕೆ ಬೆಳೆಸುತ್ತಾರೆ ಎಂದರು.

ರಾಜ್ಯದ ಬೆಳವಣೆಗೆಗಳ ಬಗ್ಗೆ ಮುಖ್ಯಮಂತ್ರಿ ಗಳು ಸ್ಪಷ್ಟ ಉತ್ತರ ನೀಡಿದ್ದಾರೆ. ಎಲ್ಲಾ ಧರ್ಮೀಯರಿಗೂ ಗೌರವ ಕೊಡುವ ಕೆಲಸ‌ ಮಾಡಿದ್ದಾರೆ. ಕಾನೂನನ್ನು ಕಾಪಾಡುವ ಕೆಲಸ ಎಲ್ಲರೂ ಮಾಡಬೇಕು.ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥ ನಾಯಕರು. ರಾಜ್ಯ ಬಜೆಟ್ ನಲ್ಲಿ ಸಿಎಂ ಏನು ಅಂತಾ ನಿರೂಪಿಸಿದ್ದಾರೆ. ಕೊರೊನಾ ಸಂದರ್ಭದಲ್ಲೂ ಒಳ್ಳೆಯ ಬಜೆಟ್ ನೀಡಿದ್ದಾರೆ. ಬೊಮ್ಮಾಯಿ ಚಾಣಾಕ್ಯನ ರೀತಿಯಲ್ಲಿ ರಾಜಕೀಯ ಮಾಡುತ್ತಾರೆ. ಪ್ರತಿಪಕ್ಷಗಳಿಗೆ ಇದನ್ನೆಲ್ಲಾ ತಡೆಯೋಕೆ ಆಗುತತಿಲ್ಲ. ಹೀಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!