ಸಿದ್ದರಾಮಯ್ಯ ಹೇಳಿಕೆಯಿಂದ ಬಹಳ ನೋವಾಗಿದೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಲಿಂಗಾಯತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮುದಾಯದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೆಯಿಂದ ನೋವಾಗಿದೆ ಎಂದರು.

ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರ ಗೌರವ, ಘನತೆಗೆ ತಕ್ಕುದ್ದಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನರೇ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!